ಸುಳ್ಯ : ಬುಧವಾರ ಬೆಳಿಗ್ಗೆ ಅರಂತೋಡು ಬಳಿಯ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ವಿರಾಜಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ಕಾರು ದೇವರಕೊಲ್ಲಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.ಅಪಘಾತದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಸಾಗಿಸಲಾಯಿತು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


