Saturday, March 14, 2026
Flats for sale
Homeಕ್ರೈಂಸುಳ್ಯ : ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ : ಬೆಳ್ಳಂಬೆಳಗ್ಗೆ ಸುಳ್ಯದಲ್ಲಿ ಎನ್‌ಐಎ ಅಧಿಕಾರಿಗಳಿಂದ...

ಸುಳ್ಯ : ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ : ಬೆಳ್ಳಂಬೆಳಗ್ಗೆ ಸುಳ್ಯದಲ್ಲಿ ಎನ್‌ಐಎ ಅಧಿಕಾರಿಗಳಿಂದ ದಿಢೀ‌ರ್ ದಾಳಿ.

ಸುಳ್ಯ : ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು ಹಲವು ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದುಬಂದಿದೆ .ಉಗ್ರ ಕೃತ್ಯಗಳ ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ. ಬೆಂಗಳೂರಿನ ಪ್ರಕರಣದ ಆರೋಪಿಯೊಂದಿಗೆ ಸುಳ್ಯ ನಿವಾಸಿ ಬಿಜು ಅಬ್ರಹಾಂ ಎನ್ನುವಾತನ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಸುಲ್ತಾನ್ ಪಾಳ್ಯ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿದ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಬಿಜು ಅಬ್ರಹಾಂ ಸುಳ್ಯ ಎಣ್ಮೂರಿನ ಚಿದಾನಂದ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದ ಈ ಹಿನ್ನೆಲೆ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ದಾಳಿನಡೆಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular