ಹಾವೇರಿ : ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿವೆ.ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ.
ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ.ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್ ಬಾಕ್ಸ್ಗಳಿಗೂ ಸಂಬಂಧ ಇಲ್ಲ ಎಂದು ಈ ಬಗ್ಗೆ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದ್ದು ಕಿಡಿಗೇಡಿಗಳು ಬಾಕ್ಸ್ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬ್ಯಾಲೆಟ್ ಬಾಕ್ಸ್ಗಳನ್ನು ಇಟ್ಟಿದ್ದ ಗೋದಾಮಿಗೆ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.


