Thursday, July 23, 2026
Homeರಾಜ್ಯಹಾವೇರಿ : ಭಾರೀ ಮಳೆಗೆ ಮನೆ ಗೋಡೆ ಕುಸಿತ,ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವು.

ಹಾವೇರಿ : ಭಾರೀ ಮಳೆಗೆ ಮನೆ ಗೋಡೆ ಕುಸಿತ,ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವು.

ಹಾವೇರಿ : ರಾಜ್ಯದಲ್ಲಿ ವರುಣನ ರುದ್ರನರ್ತನದಿಂದ ಹಲವು ಸಾವು ನೋವು ಸಂಭವಿಸಿದ್ದು ಜನಜೀವವನ ಅಸ್ಥವ್ಯಸ್ತವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಮೃತಪಟ್ಟ ಘಟನೆ ನಡೆದಿದೆ.

ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳು.ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದ ಸಂದರ್ಭದಲ್ಲಿ ನಸುಕಿನ ಜಾವ ಸುಮಾರು 3.30ಕ್ಕೆ ಆರು ಜನರ ಮೇಲೆ ಗೋಡೆ ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular