Friday, August 21, 2026
Homeರಾಜ್ಯಹಾವೇರಿ : ಶಿಗ್ಗಾವಿ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಆರೋಪ ; ಹಿಂದೂ ಸಂಘಟನೆಗಳಿಂದ ರಸ್ತೆ...

ಹಾವೇರಿ : ಶಿಗ್ಗಾವಿ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಆರೋಪ ; ಹಿಂದೂ ಸಂಘಟನೆಗಳಿಂದ ರಸ್ತೆ ತಡೆದು ಪ್ರತಿಭಟನೆ.

ಹಾವೇರಿ : ಶಿಗ್ಗಾವಿಯಲ್ಲಿ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಹಾಗೂ ಬಿಜೆಪಿ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ದೇವಸ್ಥಾನದಲ್ಲಿ ಅಶುದ್ಧಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿ ಮಹಮದ್ ಜಾಪರ್‌ನನ್ನು ಗಡಿಪಾರು ಮಾಡಬೇಕು ಹಾಗೂ ಪ್ರಕರಣದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ದೇವಸ್ಥಾನವನ್ನು ಸ್ವತಃ ಸ್ವಚ್ಛಗೊಳಿಸುವಂತೆ ಕೂಡ ಒತ್ತಾಯಿಸಿದರು.

ಆರೋಪಿಯ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular