Monday, March 17, 2025
Flats for sale
Homeರಾಜ್ಯಹಾವೇರಿ ; ಹಾವೇರಿಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ.

ಹಾವೇರಿ ; ಹಾವೇರಿಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ.

ಹಾವೇರಿ ; ಜಿಲ್ಲೆಯಲ್ಲಿ ಮಂಗಳವಾರ ಮಸೀದಿಯ ಮೇಲೆ ಹಿಂದೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆಯಿಂದಾಗಿ ಎರಡು ಸಮುದಾಯಗಳ ಜನರು ಘರ್ಷಣೆಯ ಸ್ಥಿತಿಗೆ ಬಂದಿದ್ದು ,ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿದ ಹಿಂದೂ ಕಾರ್ಯಕರ್ತರು, ಸಂಗೊಳ್ಳಿ ರಾಯಣ್ಣನ (ಬ್ರಿಟಿಷರ ವಿರುದ್ಧ ಹೋರಾಡಿದ ಹುತಾತ್ಮ) ಮೆರವಣಿಗೆಗೆ ತೆರಳಿದಾಗ ಮುಸ್ಲಿಮರ ಒಂದು ವಿಭಾಗವು ಅವರ ಮೇಲೆ ಕಲ್ಲು ತೂರಾಟ ನಡೆಸಿ ಮೆರವಣಿಗೆಗೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು. ಕಳೆದ ವಾರ ಇದೇ ಕಾರ್ಯಕ್ರಮಕ್ಕೆ ಕಲ್ಲು ತೂರಾಟ ನಡೆದಿತ್ತು.

ಮಂಗಳವಾರ ಅವರ ರ್ಯಾಲಿಗೆ ಅಡ್ಡಿಪಡಿಸಿದಾಗ, ಹಿಂದೂ ಕಾರ್ಯಕರ್ತರು ಮಸೀದಿ, ಮುಸ್ಲಿಮರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದರು ಮತ್ತು ಅವರ ವಾಹನಗಳನ್ನು ಹಾನಿಗೊಳಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳೀಯ ಉರ್ದು ಶಾಲೆಯ ಮೇಲೆ ಹಿಂದೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ವಿದ್ಯಾರ್ಥಿ ತರಗತಿಯಿಂದ ಹೊರಗೆ ಓಡಿ ಬಂದು ಸಹಾಯಕ್ಕಾಗಿ ಬೀದಿಗಿಳಿದು ಅಳಲು ತೋಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗುಂಪು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ಜಖಂಗೊಳಿಸಿದೆ. ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಪೊಲೀಸರು ಬಿಗಿಯಾದ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್, ಘಟನೆ ಕುರಿತು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣನ ರ‍್ಯಾಲಿ ವೇಳೆ ಯಾರೇ ಆಗಲಿ ಕಲ್ಲು ತೂರಾಟ ನಡೆಸಿದ್ದು ತಪ್ಪಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಿದ್ದಾರೆ. ಆದರೆ, ಮಂಗಳವಾರದಂದು ಕಲ್ಲು ಬಿದ್ದಿರುವುದು ತನಗೆ ತಿಳಿದಿಲ್ಲ ಎಂದರು.

ಮಸೀದಿ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ವಿವರ ಪಡೆಯಲಾಗುವುದು,’’ ಎಂದರು.

ಹಿಂಸಾಚಾರಕ್ಕೆ ಅವಕಾಶ ನೀಡದೆ ಸೌಹಾರ್ದಯುತವಾಗಿ ಕಲಹ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸರು ಶಾಂತಿ ಕಾಪಾಡಬೇಕು, ಕಾನೂನು ಉಲ್ಲಂಘಿಸುವವರಿಗೆ ಶಿಕ್ಷೆಯಾಗಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular