ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬ ದೇವಿ ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದು, ಗುರುವಾರ ಮಧ್ಯಾಹ್ನ 12.25ಕ್ಕೆ ವಿಧ್ಯುಕ್ತವಾಗಿ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿ ದೇವಸ್ಥಾನದ ಬಾಗಿಲು ತೆರೆಯಲಾಯಿತು.
ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊAಡಿತು. ಸಂಪ್ರದಾಯದAತೆ ತಳವಾರ ವಂಶದ ನರಸಿಂಹರಾಜ್ಅ ರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ಆಶ್ವೀಜ ಮಾಸ ಹುಣ್ಣಿಮೆ ನಂತರ ಬರುವ ಮೊದಲ ಗುರುವಾರ ವಿಧಿ ವಿಧಾನದಂತೆ ಅರ್ಚಕರು ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ ಸುಮಾರು 12.25ಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಕೆ.ಎನ್. ರಾಜಣ್ಣ, ಶಾಸಕರಾದ ಸ್ವರೂಪ್, ಪ್ರಕಾಶ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಎನ್. ಇನ್ನವಳ್ಳಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹ್ಮಮದ್ ಸುಜೀತಾ, ಹೆಚ್ಚುವರಿ ಪೊಲೀಸ್ವ ರಿಷ್ಠಾಧಿಕಾರಿ ತಮ್ಮಯ್ಯ, ಹಾಸನಾಂಬ ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರ್ಣಿಮಾ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಾಗಿಲ ಬೀಗಮುದ್ರೆ ತೆರೆಯಲಾಯಿತು.
ನ.2 ರಿಂದ 15 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ೧೨ ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ದಿನದ 24 ಗಂಟೆಯೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವ್ಯವಸ್ಥೆಯನ್ನು ಜಿಲ್ಲಾಡಳಿತ ಅಚ್ಚುಕಟ್ಟಾಗಿ ಕಲ್ಪಿಸಿದೆ.


