ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುವ ಘಟನೆ ಹೆಚ್ಚಾಗಿದ್ದು ಮನೆಯ ಮಕ್ಕಳೇ ಪ್ರಾಣಕಳೆದುಕೊಳ್ಳುವುದು ಕಂಡುಬಂದಿದೆ. ಕಳೆದ 3 ತಿಂಗಳಿಂದ ಜಿಲ್ಲೆಯಲ್ಲಿ ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಬೇಲೂರು ತಾಲೂಕಿನ ನರಸಿಪುರ ಭೋವಿ ಕಾಲೋನಿಯಲ್ಲಿ ನಡೆದಿದೆ. ದೀಕ್ಷಾ(10), ನಿತ್ಯ(12), ಕುಸುಮ (8) ಮೃತರು. ಮೃತರೆಲ್ಲರೂ ಒಂದೇ ಮನೆಯ ಮಕ್ಕಳಾಗಿದ್ದಾರೆ.
ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಹಿಸಿದ್ದು ಮೇಲೆತ್ತುವ ಕಾರ್ಯ ನಡೆಯುತ್ತಿದೆ.


