Thursday, March 12, 2026
Flats for sale
Homeರಾಜ್ಯಹಾಸನ : ವಿದ್ಯಾಗಣಪತಿ ದೇವಾಲಯದ ಗಣಪತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು..!

ಹಾಸನ : ವಿದ್ಯಾಗಣಪತಿ ದೇವಾಲಯದ ಗಣಪತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು..!

ಹಾಸನ : ಪ್ರತಿನಿತ್ಯ ಪೂಜೆ ನಡೆಯುವ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ದುರುಳರು ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯಕ್ಕೆ ನುಗ್ಗಿ ಗೇಟ್‌ ತೆಗೆದು ದೇವರಿಗೆ ಚಪ್ಪಲಿ ಹಾರ ಹಾಕಿ ಕೀಚಕರು ಅವಮಾನಿಸಿದ್ದಾರೆ

ವ್ಯಾಪಾರ ಆರಂಭಿಸುವ ವ್ಯಾಪಾರಿಗಳು ಭಕ್ತಾಧಿಗಳು ಬೆಳಿಗ್ಗೆ ಪ್ರತಿದಿನದಂತೆ ನಡೆಯುವ ಪೂಜಾ ಕೈಂಕರ್ಯ ಕೈಮುಗಿಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದು ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದರಿಂದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಹಿಂದೂ ಪರ ಸಂಘಟನೆಗಳ ತೀವ್ರ ಖಂಡಿಸಿದ್ದು ಬೇಲೂರು ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ನೇತೃತ್ವದಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದು ಇಂತಹ ನೀಚ ಕೃತ್ಯ ಎಸೆಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಘಟನೆ ಇದಾಗಿದ್ದು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular