ಹಾಸನ ; ರಾಜ್ಯದಲ್ಲಿ ಸುರಿಯುವ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡಗಾಡುಗಳು ಕುಸಿಯುತ್ತಿವೆ. ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ.ಈ ಕುಸಿತಕ್ಕೆ ಆಮೆಗತಿ ಹಾಗೂ ಅವೈಜ್ಞಾನಿಕ ಕಾಮಗಾರಿಯೇ ಕರಣ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜೂನ್ 18 ರಂದು ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದರು. ಆದರೆ ಇಂದು ಮತ್ತೊಮ್ಮೆ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಗಂಟೆಗಟ್ಟಲೆ ಸಾಲು ನಿಂತ ವಾಹನಳಿಂದ ರೋಡ್ ಬ್ಲಾಕ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ದೌಡಹಿಸಿದ್ದು ಮಣ್ಣು ತೆರವು ಮಾಡುವ ಕಾರ್ಯಾಚರಣೆ ಪ್ರಾರಂಭವಾಗಿದೆ.