ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆ ಬಿದ್ದಿದೆ. ಮಧ್ಯಾಹ್ನ 12 ಗಂಟೆ ನಂತರ ಶಾಶ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಾಯಿತು. ಬಾಗಿಲು ಮುಚ್ಚುವ ಮುನ್ನಾ ದಿನವಾದ ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದಿದ್ದರು ಇದೀಗ ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಶುರುವಾಗಿದ್ದು ದಾಖಲೆಯ ಆದಾಯ ಸಂಗ್ರಹವಾಗಿದೆ.
ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ, ತಹಸೀಲ್ದಾರ್‌ಗಳ ಸಮ್ಮುಖದಲ್ಲಿ 500 ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಎಣಿಕೆ ಕಾರ್ಯ ನಡೆಯುತ್ತಿದ್ದು ಭಕ್ತರು ಕಾಣಿಕೆ ರೂಪದಲ್ಲಿ ಹುಂಡಿಗೆ ಹಣ, ಬೆಳ್ಳಿ, ಚಿನ್ನಾಭರಣಗಳನ್ನು ಹಾಕಿದ್ದಾರೆ.
ಹುಂಡಿ ಎಣಿಕೆ ಕಾರ್ಯಕ್ಕೆ ಈ ಬಾರಿ ಹೆಚ್ಚು ಸಿಬ್ಬಂದಿ ಬಳಕೆಮಾಡಿದ್ದೂ ಬ್ಯಾಂಕ್‌ನ ಸಿಬ್ಬಂದಿಗಳು ಕೂಡ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.ಅ.24 ರಿಂದ ನ.3 ರವರೆಗೆ ನಡೆದಿದ್ದ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆದಿದ್ದು ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ 9,67,27,180 ರೂ ದಾಖಲೆಯ ಆದಾಯ ಸಂಗ್ರಹವಾಗಿದೆ ಎಂದು ಇದೀಗ ನಡೆಯುತ್ತಿರುವ ಹುಂಡಿ ಎಣಿಕೆ ಕಾರ್ಯದಿಂದ ತಿಳಿದುಬಂದಿದೆ.