Friday, March 13, 2026
Flats for sale
Homeರಾಜಕೀಯಹೈದರಾಬಾದ್ : ರೇವಂತರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿ.

ಹೈದರಾಬಾದ್ : ರೇವಂತರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿ.

ಹೈದರಾಬಾದ್ : ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅಭೂತಪೂರ್ವ ಗೆಲುವು ತಂದುಕೊಟ್ಟ ಪಿಸಿಸಿ ಅಧ್ಯಕ್ಷ ರೇವಂತರೆಡ್ಡಿಗೆ ತೆಲಂಗಾಣದ ನೂತನ ಮುಖ್ಯಮಂತ್ರಿ ಪಟ್ಟ ಒಲಿದುಬಂದಿದೆ.

ರೆಡ್ಡಿ ನೇತೃತ್ವದ ನೂತನ ಸಚಿವ ಸಂಪುಟ ಗುರುವಾರ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ವೀಕ್ಷಕ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ತೆಲಂಗಾಣ ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಪ್ರಕಟಿಸಿದರು.

ಹೈದರಾಬಾದ್‌ನ ಲಾಲಬಹದ್ದೂರ್ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅದ್ಧೂರಿ ಸಿದ್ಧತೆ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮೊದಲಾದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಿಎಂ ಕುರ್ಚಿಗೆ ನಾಲ್ವರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಬಹುತೇಕ ಶಾಸಕರು ರೇವಂತರೆಡ್ಡಿ ಪರ ಒಲವು ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular