Sunday, March 15, 2026
Flats for sale
Homeರಾಜ್ಯಅಫಜಲಪುರ : ರಾಜ್ಯದಲ್ಲಿ ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಹೆಚ್ಚಳ : ಶಿವಾನಂದ ತಗಡೂರ ಕಳವಳ.

ಅಫಜಲಪುರ : ರಾಜ್ಯದಲ್ಲಿ ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಹೆಚ್ಚಳ : ಶಿವಾನಂದ ತಗಡೂರ ಕಳವಳ.

ಅಫಜಲಪುರ: ರಾಜ್ಯದಲ್ಲಿ ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ ಇದರಿಂದ ನಿಜವಾದ ಪ್ರಮಾಣಿಕ ಪತ್ರಕರ್ತರ ವ್ಯಕ್ತಿತ್ವಕ್ಕೆ ದಕ್ಕೆ ಉಂಟಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಕಳವಳ ವ್ಯಕ್ತಪಡಿಸಿದ್ದಾರೆ, ಅವರು ಬ್ಲಾಕ್ ಮೇಲ್ ಪತ್ರಕರ್ತರ ಕಡಿವಾಣಕ್ಕೆ ಪತ್ರಕರ್ತರ ಸಂಘ ನಿರಂತರ ಪ್ರಯತ್ನ ಮಾಡುತ್ತಿದೆ ಹೇಳಿದ್ದಾರೆ .

ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪತ್ರಕರ್ತರಾದವರು ಬಡವರ ಶೋಷಿತರ, ದೀನ ದಲಿತರ ಕಣ್ಣೀರು ಒರೆಸುವ ಧ್ವನಿಯಾಗಬೇಕು ಎಂದು ಕಿವಿ ಮಾತು ಹೇಳಿದರು. ಇದೆ ಸಂದರ್ಭದಲ್ಲಿ ಶಾಸಕ ಎಂವೈ ಪಾಟೀಲ , ಮಾಜಿ ಜಿಪಂ ಅಧ್ಯಕ್ಷ ನಿತೀನ್ ಗುತ್ತೇದಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಜಿಡಗಾ ಮಠದ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳು ಹಾಗೂ ಮಳೇಂದ್ರ ಮಠದ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕ ಪತ್ರಕರ್ತ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗಿಯಾಗಿದರು.

RELATED ARTICLES

LEAVE A REPLY

Please enter your comment!
Please enter your name here

Most Popular