ಆಹಮದಬಾದ್ ; ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಜರಾತ್ನ ಮೇಧಾನಿ ನಗರದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನವು ಏರ್ ಇಂಡಿಯಾ ಬೊಯಿಂಗ್ 778 ಎಂದು ಹೇಳಲಾಗಿದೆ. ವಿಮಾನದಲ್ಲಿ 242 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಈ ವಿಮಾನದಲ್ಲಿ ಗುಜಾರಾತ್ ನ ಮಾಜಿ ಸಿ.ಎಂ ವಿಜಯ್ ರುಪಾನಿ ಪ್ರಯಣಿಸುತ್ತಿದ್ದರೆಂದು ಮಾಹಿತಿ ದೊರೆತಿದೆ.
ಏರ್ ಇಂಡಿಯಾ ವಿಮಾನ – AI171 – ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳುತ್ತಿತ್ತು.ಸ್ಥಳೀಯ ಕಾಲಮಾನ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಅಪಘಾತ ಸಂಭವಿಸಿದ್ದು, ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಎತ್ತರವನ್ನು ಕಳೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಈ ಘಟನೆ ನಡೆದ ತಕ್ಷಣ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೂರತ್‌ನಿಂದ ಅಹಮದಾಬಾದ್‌ಗೆ ಬರಲು ಹೊರಟಿದ್ದಾರೆ. ಅಲ್ಲದೆ, ಉನ್ನತ ಅಧಿಕಾರಿಗಳಿಗೆ ಸ್ಥಳದಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ. ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿಗಳು ಅಧಿಕಾರಿಗಳು ಮತ್ತು ವೈದ್ಯರಿಗೆ ತಕ್ಷಣವೇ ಹಾಜರಿರುವಂತೆ ಸೂಚಿಸಿದ್ದಾರೆ.
ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರು 8,200 ಗಂಟೆಗಳ ಅನುಭವ ಹೊಂದಿರುವ ಎಲ್‌ಟಿಸಿ ಆಗಿದ್ದಾರೆ. ಸಹ-ಪೈಲಟ್‌ಗೆ 1,100 ಗಂಟೆಗಳ ಹಾರಾಟದ ಅನುಭವವಿತ್ತು. ಎಟಿಸಿ ಪ್ರಕಾರ, ವಿಮಾನವು ಅಹಮದಾಬಾದ್‌ನಿಂದ 1339 IST (0809 UTC) ರನ್‌ವೇ 23 ರಿಂದ ಹೊರಟಿತು.