ಉಡುಪಿ : ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ ಅವರನ್ನು ಸರಕಾರ ನೇಮಕ ಮಾಡಿದೆ. ಉಳ್ಳಾಲದ ಪಾವೂರು ಗ್ರಾಮದವರಾದ ಡಾ.ವಿದ್ಯಾಕುಮಾರಿ 2014ರ ಬ್ಯಾಚ್ನ ಐಎಎಸ್ ಅಧಿಕಾರಿ. ಈ ಹಿಂದೆ ಎರಡು ವರ್ಷಗಳ ಕಾಲ ಉಡುಪಿ ಹೆಚ್ಚುವರಿ ಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ.


