Saturday, March 14, 2026
Flats for sale
Homeಜಿಲ್ಲೆಉಡುಪಿ : ಏಪ್ರಿಲ್ 24 ರಂದು ಉಡುಪಿಯಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ.

ಉಡುಪಿ : ಏಪ್ರಿಲ್ 24 ರಂದು ಉಡುಪಿಯಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ.

ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಹಲವು ಪ್ರಮುಖ ನಾಯಕರು ಪ್ರಚಾರ ನಡೆಸುತಿದ್ದು ಚುನಾವಣಾ ಪ್ರಚಾರದ ಕೊನೆಯ ದಿನವಾದ ಏಪ್ರಿಲ್ 24 ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಇದೇ ವೇಳೆ, ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಮತ್ತು ಸಂಸದೆ ಸುಮಲತಾ ಅವರು ಏಪ್ರಿಲ್ 19 ರಂದು ಉಪ್ಪೂರಿನಲ್ಲಿ ಪ್ರಚಾರ ನಡೆಸಲಿದ್ದು, ರಾಜ್ಯ ಬಿಜೆಪಿ ಮುಖ್ಯಸ್ಥ ಬಿ ವೈ ವಿಜಯೇಂದ್ರ ಏಪ್ರಿಲ್ 20 ರಂದು ಉಡುಪಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 22 ರಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪೂಜಾರಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular