Friday, November 22, 2024
Flats for sale
Homeಜಿಲ್ಲೆಉಡುಪಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿ ಬಂಧನ..!

ಉಡುಪಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿ ಬಂಧನ..!

ಉಡುಪಿ : ಶಿಲ್ಪಿ ಕೃಷ್ಣ ನಾಯಕ್ ರಿಗೆ ಕಾರ್ಕಳ ಪರುಶುರಾಮ್ ಥೀಮ್ ಪಾರ್ಕ್ ನಲ್ಲಿ ಕಂಚಿನ ಪರುಶುರಾಮ್ ಮೂರ್ತಿ ನಿರ್ಮಾಣಕ್ಕೆ ನೀಡಲಾಗಿತ್ತು. ಆದರೆ ಅವರು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆ ಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ್ದರು.

ಪರಶುರಾಮ್ ಥೀಮ್ ಪಾರ್ಕ್​ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದರು.

ಈ ವಿಚಾರಕ್ಕೆ ಸಂಬಧಿಸಿದಂತೆ ಭಾರಿ ವಿವಾದವಾಗಿದ್ದು, ಸದ್ಯ ಸರಕಾರ ತನಿಖೆ ನಡೆಸುತ್ತಿದೆ. ಈ ನಡುವೆ ಸರಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪ್ರಕರಣ ದಾಖಲಾಗಿತ್ತು.

ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ಧುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಗೊಳಿಸಿತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular