ಉಡುಪಿ : ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. Z-ಪ್ಲಸ್ ಭದ್ರತೆಯೊಂದಿಗೆ ಆಗಮಿಸಿದ್ದರಿಂದ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪೂಜೆ ಬಳಿಕ ಅವರು ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಕೇರಳ ಮುಖ್ಯಮಂತ್ರಿಯಾದ ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ನೀಡಿದ ಮೊದಲ ಭೇಟಿಯಾಗಿದೆ.
ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿರುವ ವಿ.ಡಿ. ಸತೀಶನ್ ಅವರನ್ನು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


