Sunday, June 14, 2026
Flats for sale
Homeಜಿಲ್ಲೆಉಡುಪಿ : ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಅನಂತ ಅಂಬಾನಿ ಭೇಟಿ

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಅನಂತ ಅಂಬಾನಿ ಭೇಟಿ

ಉಡುಪಿ : ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ ಅಂಬಾನಿ, ತಮ್ಮ ಕುಟುಂಬದ ಗುರುಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದ ವತಿಯಿಂದ ಅವರಿಗೆ ಗೌರವ ಸಮರ್ಪಿಸಲಾಯಿತು.

ಮೂಕಾಂಬಿಕಾ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಅನಂತ ಅಂಬಾನಿ, ದೇವಿಯ ಆಶೀರ್ವಾದ ಪಡೆದರು. ಇತ್ತೀಚಿನ ದಿನಗಳಲ್ಲಿ ಕೇರಳ ಸೇರಿದಂತೆ ದೇಶದ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಅನಂತ ಅಂಬಾನಿ ಅವರ ‘ಟೆಂಪಲ್ ರನ್’ ಗಮನ ಸೆಳೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular