ಉಡುಪಿ : ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಅವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿಯಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


