ಉಡುಪಿ : ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ನ. 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪ್ರಧಾನಿ ಆಗಮಿಸುವರು.
ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನಾ ಪತ್ರ ರವಾನಿಸಿದ್ದರು. ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಮೋದಿ ಅವರು ಕೃಷ್ಣ ಮಠಕ್ಕೆ ಆಗಮಿಸಿದ್ದನ್ನಿಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.


