Monday, November 16, 2026
Homeಜಿಲ್ಲೆಉಡುಪಿ : ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ದನ ಕಳ್ಳತನಕ್ಕೆ ಯತ್ನ – ಸಿಸಿಟಿವಿಯಲ್ಲಿ ಸೆರೆಯಾದ...

ಉಡುಪಿ : ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ದನ ಕಳ್ಳತನಕ್ಕೆ ಯತ್ನ – ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ..!

ಉಡುಪಿ : ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ದನ ಕಳ್ಳತನಕ್ಕೆ ಯತ್ನಿಸಿದ ಘಟನೆ ಭಾನುವಾರ (ನ.15) ಮುಂಜಾನೆ ನಡೆದಿದೆ. ಕಾರಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಬಳಿ ಮಲಗಿದ್ದ ದನಗಳನ್ನು ಕಳವು ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಮುಂಜಾನೆ ಕಾರಿನಲ್ಲಿ ಸ್ಥಳಕ್ಕೆ ಬಂದ ಇಬ್ಬರು ವ್ಯಕ್ತಿಗಳು ಕಾರಿನಿಂದ ಕೆಳಗಿಳಿದು ದನಗಳ ಬಳಿಗೆ ತೆರಳಿದ್ದಾರೆ. ಅಪರಿಚಿತರು ತಮ್ಮತ್ತ ಬರುತ್ತಿರುವುದನ್ನು ಕಂಡ ದನಗಳ ಹಿಂಡು ಬೆದರಿ ಅಲ್ಲಿಂದ ದಿಕ್ಕಾಪಾಲಾಗಿ ಓಡಿದೆ. ಇದರಿಂದ ದನಗಳು ಕಳ್ಳರ ಕೈಗೆ ಸಿಗದೆ ಪಾರಾಗಿವೆ.

ದನಗಳು ಓಡಿ ಹೋದ ಬಳಿಕವೂ ಅಪರಿಚಿತರು ಕೆಲಕಾಲ ಸ್ಥಳದಲ್ಲಿಯೇ ಕಾದಿದ್ದಾರೆ. ನಂತರ ತಮ್ಮ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಯ ಸಂಪೂರ್ಣ ದೃಶ್ಯಾವಳಿ ದೇವಸ್ಥಾನದ ಸಮೀಪ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆಯ ವೇಳೆ ನಡೆದ ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.

ದನ ಕಳ್ಳತನಕ್ಕೆ ಯತ್ನಿಸಿದ ಅಪರಿಚಿತರನ್ನು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular