ಉಡುಪಿ : ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಜುಲೈ 22 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:20 ರ ನಡುವೆ ಈ ಘಟನೆ ಸಂಭವಿಸಿದೆ.
ಪೆರ್ಡೂರು ಗ್ರಾಮದ ನಿವಾಸಿ ನಯನಾ (17) ಮೃತ ವಿದ್ಯಾರ್ಥಿನಿ.
ಮಾನಸಿಕವಾಗಿ ನೊಂದಿದ್ದ ನಯನಾ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ.ಆಕೆಯ ಮನೆಯ ಮೇಲ್ಮಹಡಿಯ ಕೊಠಡಿಯಲ್ಲಿ ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.
ಘಟನೆ ಕುರಿತು ಆಕೆಯ ತಾಯಿ ಶೋಬಾ ದೂರು ನೀಡಿದ್ದು, ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


