ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸರು ಗುರುವಾರ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಮಹೇಶ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಸಂಚಾರಿ ಪೀಠದಿಂದ ಆದೇಶ ನೀಡಲಾಗಿದೆ.


