Wednesday, July 22, 2026
Homeಜಿಲ್ಲೆಉಡುಪಿ : ಬ್ರಹ್ಮಾವರದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೇರಳದ ಕಾರ್ಮಿಕ ಶವವಾಗಿ ಪತ್ತೆ,ಲಾಕ್ ಆಫ್ ಡೆತ್ ಶಂಕೆ...

ಉಡುಪಿ : ಬ್ರಹ್ಮಾವರದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೇರಳದ ಕಾರ್ಮಿಕ ಶವವಾಗಿ ಪತ್ತೆ,ಲಾಕ್ ಆಫ್ ಡೆತ್ ಶಂಕೆ ..!

ಉಡುಪಿ : ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತರಲಾಗಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಮುಂಜಾನೆ ಸೆಲ್‌ನ ಸ್ನಾನಗೃಹದಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತರನ್ನು ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ.

ಬಿಜು ಮೋಹನ್ ಹಂಗಾರಕಟ್ಟೆಯ ಮೀನು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದ. ಸೂರಿಬೆಟ್ಟುವಿನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನವೆಂಬರ್ 9ರ ರಾತ್ರಿ ಆತ ಸಮೀಪದಲ್ಲೇ ವಾಸಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದ.

ಮಹಿಳೆಯ ಕಿರುಚಾಟ ಕೇಳಿ ಸ್ಥಳೀಯರು ಜಮಾಯಿಸಿ ಬಿಜು ಮೋಹನ್ ಅವರನ್ನು ಮನೆಯೊಳಗೆ ಬಂಧಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಮದ್ಯದ ಅಮಲಿನಲ್ಲಿ ಕಾಣಿಸಿಕೊಂಡ ಬಿಜು ಮೋಹನ್ ನನ್ನು ಸೆಲ್ ನಲ್ಲಿ ಇರಿಸಲಾಗಿತ್ತು ಎಂದು ವರದಿಯಾಗಿದೆ. ಮುಂಜಾನೆ 3:30 ರ ಸುಮಾರಿಗೆ, ಅವರು ಹತ್ತಿರದ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular