ಉಡುಪಿ : ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇತ್ತೀಚೆಗೆ ಕೊಡಗಿನಲ್ಲಿ ಯುವತಿಯೊಬ್ಬಳು ಹೀಗೇ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕ ಪೊನ್ನಪ್ಪ (24) ಮೃತ ದುರ್ದೈವಿ. ಕರ್ತವ್ಯಕ್ಕೆಂದು ಮನೆಯಿಂದ ಹೊರಟಾಗ ಹೃದಯ ಬಡಿತವೇ ನಿಂತು ಹೋಗಿದೆ. ಎದೆ ನೋವೆಂದು ಒದ್ದಾಡಿದ ನಿಲಿಕ ಕುಸಿದು ಬಿದ್ದಿದ್ದಳು. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ದೃಢಪಡಿಸಿದ್ದರು.
ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾಗ್ಯಶ್ರೀ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಪಡೆಯುವ ಮುನ್ನವೇ ಆಕೆ ಕೊನೆಯುಸಿರೆಳೆದಿದ್ದಾಳೆ. ಆಕೆಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂದು ತಿಳಿದುಬಂದಿದೆ.