ಉತ್ತರ ಕನ್ನಡ : ಜಿಲ್ಲೆಯ ಜೋಯಿಡ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ 13 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಗಂಗುಗವಳಿ ಎಂದು ಗುರುತಿಸಲಾಗಿದೆ. 7ನೇ ತರಗತಿಯಲ್ಲಿ ಓದುತ್ತಿದ್ದ ಈ ಬಾಲಕಿಗೆ ಯಾವುದೇ ಆರೋಗ್ಯ ಸಮಸ್ಯೆ ಅಥವಾ ಹೃದಯ ಸಂಬಂಧಿತ ಕಾಯಿಲೆ ಇರಲಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.
ಎಲ್ಲ ಮಕ್ಕಳಂತೆ ಆಟ-ಪಾಠಗಳಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿನಿ, ಸಾವಿಗೆ ಮುನ್ನದ ದಿನವೂ ಸಂಜೆವರೆಗೆ ಆಟವಾಡಿದ್ದಳು. ಆದರೆ ಮರುದಿನ ಬೆಳಿಗ್ಗೆ ಏಕಾಏಕಿ ವಾಂತಿ ಮಾಡಿಕೊಂಡು ಕೆಲವೇ ಕ್ಷಣಗಳಲ್ಲಿ ಕುಸಿದು ಸಾವನ್ನಪ್ಪಿದ್ದಾಳೆ.
ಈ ಕುರಿತು ರಾಮ್ನಗರ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಆಕಸ್ಮಿಕ ಸಾವು ಕುಟುಂಬದವರನ್ನು ದುಃಖದಲ್ಲಿ ಮುಳುಗಿಸಿದೆ.


