Thursday, July 23, 2026
Homeಜಿಲ್ಲೆಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರಿನ ಯುವತಿ ಸಾವು .

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರಿನ ಯುವತಿ ಸಾವು .

ಉಳ್ಳಾಲ : ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ಕೋಟೆಕಾರು ಬೀರಿ ನಿವಾಸಿ ವಿದಿಶಾ (28) ರವರು ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದಿಶಾ ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.ಬಳಿಕ 2019ರಲ್ಲಿ ದುಬೈ ತೆರಳಿ ಕಳೆದ ಐದು ವರುಷಗಳಿಂದ ವಿಮಾನ ನಿಲ್ದಾಣದಲ್ಲಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು.ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular