ಮಂಗಳೂರು : ಉಳ್ಳಾಲ ಸಮೀಪದ ಮುಡಿಪು ಪ್ರದೇಶದಲ್ಲಿ ಪಾದಚಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಪಾದಚಾರಿ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಉಳ್ಳಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.



