ಬಾಲಸೋರ್ (ಒಡಿಶಾ): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳಪರಿಶೀಲನೆ ಬಳಿಕ ಅವರು ಸಂತ್ರಸ್ತರ ಭೇಟಿಗೆ ಆಸ್ಪತ್ರೆಗೆ ತೆರಳಿದರು.
ಇತ್ತೀಚಿನ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟ ನಿನ್ನೆಯ ಅಪಘಾತದ ನೇರ ಪರಿಶೀಲನೆಯನ್ನು ಅವರು ಕೈಗೊಂಡರು. ಇತ್ತೀಚಿನ ಅಂದಾಜಿನ ಪ್ರಕಾರ 281 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ದುರಂತ ನಡೆದ ಸ್ಥಳದ ಸಮೀಪವೇ ಪ್ರಧಾನಿ ನರೇಂದ್ರ ಮೋದಿ ಅವರು ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಅಪಘಾತದಲ್ಲಿ ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದು, ಅಲ್ಲಿ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ ತಿಳಿದು ಎಂದು ಬಂದಿದೆ.
ಇಂದು ಮುಂಜಾನೆ, ರೈಲು ಅಪಘಾತಕ್ಕೆ ಸಂಬಂಧಿಸಿ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಸಭೆ ಕರೆದಿದ್ದರು.


