Wednesday, July 8, 2026
Homeಜಿಲ್ಲೆಕಡಬ ; ಎರಡನೇ ಬಾರಿ ಮತ್ತೆ ದರ್ಗಾಗೆ ನುಗ್ಗಿದ ಕಳ್ಳರು,ಹಣ ಕಳವು.

ಕಡಬ ; ಎರಡನೇ ಬಾರಿ ಮತ್ತೆ ದರ್ಗಾಗೆ ನುಗ್ಗಿದ ಕಳ್ಳರು,ಹಣ ಕಳವು.

ಕಡಬ ; ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular