Tuesday, July 1, 2025
Flats for sale
Homeಕ್ರೈಂಕಡಬ : ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ,ಸಹೋದರನ ಬಂಧನ..!

ಕಡಬ : ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ,ಸಹೋದರನ ಬಂಧನ..!

ಕಡಬ : ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗಾಯಾಳು ಹನುಮಪ್ಪ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಆರೋಪಿ ಸಹೋದರ ನಿಂಗಪ್ಪ (21) ನನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಹೋದರರು ಭಾನುವಾರ ಮಧ್ಯಾಹ್ನ ತಮ್ಮ ಊರಿಗೆ ರೈಲಿನಲ್ಲಿ ಹೊರಟಿದ್ದರು. ಅಣ್ಣನನ್ನು ಮುಗಿಸಲು ಮೊದಲೇ ಸಂಚು ರೂಪಿಸಿದ್ದ ನಿಂಗಪ್ಪ ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ಅಣ್ಣನನ್ನು ಕೆಳಗಿಳಿಸಿದ್ದಾನೆ. ರೈಲು ಹೊರಟುಹೋದ ನಂತರ, ನಿಲ್ದಾಣದಿಂದ ಒಂದು ಕಿ.ಮೀ ದೂರದ ಕೋಡಿಂಬಾಳ ಗ್ರಾಮದ ಕೋರಿಯಾರ್ ಎಂಬಲ್ಲಿಗೆ ಕರೆದೊಯ್ದು, ಏಕಾಏಕಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಹನುಮಪ್ಪ, ಪಕ್ಕದಲ್ಲೇ ಇದ್ದ ಚರಂಡಿಗೆ ಹಾರಿ ನೀರಿನಲ್ಲಿ ಹೊರಳಾಡಿದ್ದ ಆತನ ಚೀರಾಟ ಕೇಳಿ ಸ್ಥಳೀಯರು ಧಾವಿಸಿ ಬಂದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮೊದಲು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಈ ಬಗ್ಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮೃತ ಹನುಮಪ್ಪನಿಗೆ ವಿಪರೀತ ಕುಡಿತದ ಚಟವಿದ್ದು 14 ವರ್ಷಗಳ ಹಿಂದೆ ಆತನ ಹೆಂಡತಿ ಮನೆ ಬಿಟ್ಟು ಹೋಗಿದ್ದಳು. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಈತ ಯತ್ನಿಸಿದ್ದು ತನ್ನ ಜೊತೆಯೂ ಗಲಾಟೆ, ಹಿಂಸೆಯಿಂದ ರೋಸಿಹೋಗಿ ಅವನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ, ಆರೋಪಿ ನಿಂಗಪ್ಪ ಹೇಳಿದ್ದಾನೆ.

ಮಂಗಳೂರು ರೈಲ್ವೇ ಪೊಲೀಸರು ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಬಂದು ಮಹಜರು ಮಾಡಿದ್ದು ಕೌಟಂಬಿಕ ಕಲಹದಿಂದ ಈ ಘಟನೆ ನಡೆದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಇನ್ಸ್ಪೆಕ್ಟರ್ ಜಯಾನಂದ, ಎಎಸ್ಐ ಮಧುಚಂದ್ರ,ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆದಿದ್ದು ಆರಂಭದಲ್ಲಿ ಕಡಬ ಠಾಣಾ ಎಸ್.ಐ. ಅಭಿನಂದನ್ ಮತ್ತು ಸಿಬ್ಬಂದಿಗಳಿಂದ ಆರೋಪಿ ವಶಕ್ಕೆ ಪಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular