ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಮಳೆಗಾಳಿಯ ಅಬ್ಬರಕ್ಕೆ ಅಡಿಕೆಮರವೊಂದು ಮುರಿದು ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಯಾದವ ಗೌಡ (66) ಎಂದು ಗುರುತಿಸಲಾಗಿದೆ.
ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಯಿಂದ ಅಡಿಕೆಮರ ಮುರಿದು ಅವರ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.


