ನವದೆಹಲಿ : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದ ಅವರು, ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.
