Wednesday, July 22, 2026
Homeರಾಜ್ಯಕಲಬುರಗಿ : ಬೈಕ್ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಕಿರಾತಕ.

ಕಲಬುರಗಿ : ಬೈಕ್ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಕಿರಾತಕ.

ಕಲಬುರಗಿ ; ಕಲಬುರಗಿ ನಗರದಲ್ಲಿ ಹೊಸದಾಗಿ ಖರೀದಿಸಿದ ಎಲೆಕ್ಟ್ರಿಕ್ ಬುಕ್ ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂಗೆ ಬೆಂಕಿ ಇಟ್ಟಿರುವ ಘಟನೆ ಕಹುಮನಾಬಾದ್ ರಸ್ತೆಯಲ್ಲಿ ನಡೆದಿದೆ.ಮಹಮ್ಮದ್ ನದೀಮ್ ವ್ಯಕ್ತಿ ವಿರುದ್ಧ ಈ ಆರೋಪ ಕೇಳಿಬಂದಿದೆ. ಸಿಬ್ಬಂದಿಯೊಂದಿಗೆ ವಾಗ್ವಾದದ ನಂತರ ನೊಂದ ಓಲಾ ಎಲೆಕ್ಟ್ರಿಕ್ ಕಂಪನಿಯ ಶೋರೂಂಗೆ ಬೆಂಕಿ ಹಚ್ಚಿದ್ದಾರೆ.ಆರಂಭದಲ್ಲಿ ಎಲ್ಲರೂ ಶಾಟ್೯ ಸರ್ಕ್ಯೂಟ್​ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರ ವಿಚಾರಣೆ ವೇಳೆ ಬೆಂಕಿ ಹಚ್ಚಿರೋದು ಪತ್ತೆಯಾಗಿದೆ ಎನ್ನಲಾಗಿದೆ.

ತನ್ನ ಏಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಅಂತ ಶೋ ರೂಂ ಸಿಬ್ಬಂದಿ ಜೊತೆ ವಾಗ್ವಾದ ಮಾಡಿದ್ದ.ಇದರಿಂದ ಕೋಪಿಸಿಕೊಂಡಿದ್ದ ಆರೋಪಿ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿರೋದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular