Sunday, June 7, 2026
Flats for sale
Homeರಾಜ್ಯಕಲಬುರಗಿ : ಮೊಮ್ಮಗನ ಮುಖ ನೋಡಲು ಕೇಳಿದ್ದಕ್ಕೆ ಮಾವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೆ...

ಕಲಬುರಗಿ : ಮೊಮ್ಮಗನ ಮುಖ ನೋಡಲು ಕೇಳಿದ್ದಕ್ಕೆ ಮಾವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೆ ಸಾವು.

ಕಲಬುರಗಿ : ಮೊಮ್ಮಗನ ಮುಖ ತೋರಿಸುವಂತೆ ಕೇಳಿದ್ದ ವಿಚಾರವಾಗಿ ಉಂಟಾದ ಕುಟುಂಬ ಕಲಹವು ದುರಂತ ಅಂತ್ಯ ಕಂಡಿದ್ದು, ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮೃತರನ್ನು ರಾಜು ರಾಠೋಡ್ (48) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮಾಹಿತಿಯ ಪ್ರಕಾರ, ಮೊಮ್ಮಗ ಜನಿಸಿದ್ದ ಹಿನ್ನೆಲೆಯಲ್ಲಿ ಮಗುವಿನ ಮುಖ ತೋರಿಸುವಂತೆ ರಾಜು ರಾಠೋಡ್ ತಮ್ಮ ಸೊಸೆಗೆ ವಿಡಿಯೋ ಕಾಲ್ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಸೊಸೆ ಹಾಗೂ ಅವರ ಕುಟುಂಬಸ್ಥರು ಫೋನ್ ಮಾಡಿ ಕರೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಾಜು ರಾಠೋಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular