Thursday, July 23, 2026
Homeರಾಜ್ಯಕಲಬುರಗಿ ; ಮೋದಿ ಪ್ರಧಾನಿಯಲ್ಲ ಪ್ರಚಾರ ಮಂತ್ರಿ ಎಂದ ಮರಿ ಖರ್ಗೆ.

ಕಲಬುರಗಿ ; ಮೋದಿ ಪ್ರಧಾನಿಯಲ್ಲ ಪ್ರಚಾರ ಮಂತ್ರಿ ಎಂದ ಮರಿ ಖರ್ಗೆ.

ಕಲಬುರಗಿ ; “ನರೇAದ್ರ ಮೋದಿ ಅವರು ಪ್ರಧಾನ ಮಂತ್ರಿ ಅಲ್ಲ,ಪ್ರಚಾರ ಮಂತ್ರಿ. ಅವರಿಗೆ ಇವೆಂಟ್ ಮ್ಯಾನೇಜ್ಮೆಂಟ್ ನಲ್ಲಿ ಬಹಳ ಪರಿಣಿತಿ ಇದೆ. ಚುನಾವಣೆ ಸಂದರ್ಭದಲ್ಲಿ ಏನೇನು ಮಾಡಬೇಕು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುವ ಗೇಮಿಂಗ್ ಉದ್ಯಮಿಗಳ ಜೊತೆ ಸಂವಾದ ನಡೆಸಿದ್ದಾರೆ. ಗೇಮಿಂಗ್ ಇಂಡಸ್ಟಿçಯಲ್ಲಿ ಉದ್ಯೋಗ ಕೂಡ ಸೃಷ್ಟಿಸಬಹುದು ಆದರೆ, ಇವರು ಉದ್ಯಮಕ್ಕೂ ೨ ಲಕ್ಷ ಕೋಟಿ ಟ್ಯಾಕ್ಸ್ ಹಾಕಿದ್ದಾರೆ. ಆದರೆ ಈ ಬಗ್ಗೆ ಅವರು ಮಾತನಾಡುವುದಿಲ್ಲ ಎಂದರು.

ಒಂದು ಸಮೀಕ್ಷೆಯ ಪ್ರಕಾರ ಕಳೆದ ೧೦ ವರ್ಷಗಳ ಅವಧಿಯಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಶೇ.೬೭ ರಷ್ಟು ಯುವಕರು ಹೇಳಿದ್ದಾರೆ. ಆದರೆ ಪ್ರಧಾನ ಮಂತ್ರಿಗಳು ಈ ಬಗ್ಗೆ ಮಾತನಾಡುವುದಿಲ್ಲ. ಇಂತಹ ಯುವಕರ ಬಗ್ಗೆಯೂ ಅವರು ಮಾತನಾಡಬೇಕಲ್ಲ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಮರಳಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಲೀಕಯ್ಯ ಗುತ್ತೇದಾರ ಅವರು ಪಕ್ಷ ಸೇರ್ಪಡೆಯಾಗುವ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ಈ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಪಕ್ಷದ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಯಾರು ಬಂದರೂ ಅದಕ್ಕೆ ನಮ್ಮ ಸ್ವಾಗತವಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular