Wednesday, December 18, 2024
Flats for sale
Homeಜಿಲ್ಲೆಕಾರವಾರ : ಪದ್ಮಶ್ರೀ ಪುರಸ್ಕೃತೆ,ವೃಕ್ಷಮಾತೆ ತುಳಸಿ ಗೌಡ ನಿಧನ..!

ಕಾರವಾರ : ಪದ್ಮಶ್ರೀ ಪುರಸ್ಕೃತೆ,ವೃಕ್ಷಮಾತೆ ತುಳಸಿ ಗೌಡ ನಿಧನ..!

ಕಾರವಾರ : ಪದ್ಮಶ್ರೀ ಪುರಸ್ಕೃತೆ,ವೃಕ್ಷಮಾತೆ ಹಾಲಕ್ಕಿ ಸಮುದಾಯದ ತುಳಸಿಗೌಡ (86) ಇಂದು ಡಿಸೆಂಬರ್ ೧೬ ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲಿ ಸಾಲು ಮರದ ತಿಮ್ಮಕ್ಕ ಅವರಂತೆಯೇ ಪರಿಸರ ಪ್ರೇಮಿ ಎಂದೇ ಇವರು ಖ್ಯಾತರಾಗಿದ್ದರು.

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾದ ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು. ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

1944ರಲ್ಲಿ ಹೊನ್ನಳ್ಳಿ ಗ್ರಾಮದಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗೆ ಜನಸಿದ ಕೂಸಿಗೆ ತುಳಸಿ ಎಂಬ ಸಸ್ಯದ ಹೆಸರಿಟ್ಟರು. ಬಳಿಕ ಬಾಲಕಿಯಾಗಿದ್ದ ಕಾಲದಿಂದ ಹಿಡಿದು ಇಂದಿನವರೆಗೂ ತುಳಸಿ ಗೌಡ ಅವರು ಮರ ಹಾಗೂ ಕಾಡಿನಲ್ಲೇ ಬೆಳೆದು ಬಂದವರು. 12ನೇ ವಯಸ್ಸಿನಲ್ಲಿ ತುಳಸಿ ಗೌಡ ಅವರಿಗೆ ಮರಗಳ ಜೊತೆಗಿನ ಬಾಂಧವ್ಯ ಆರಂಭವಾಯ್ತು. ಬಳಿಕ ಮರಗಳ ಜೊತೆಯಲ್ಲೇ ನಿತ್ಯ ಒಡನಾಟ.. ಹೀಗಾಗಿ. ಇವರನ್ನು ‘ಅರಣ್ಯದ ಎನ್‌ಸೈಕ್ಲೋಪೀಡಿಯಾ’ ಎನ್ನುತ್ತಾರೆ. ಗಿಡ, ಮರ, ಬಳ್ಳಿ, ಅವುಗಳ ಜಾತಿ, ಯಾವ ಮರ ಹೇಗೆ ಬೆಳೆಯುತ್ತೆ, ಯಾವ ಗಿಡಕ್ಕೆ ಎಷ್ಟು ನೀರು ಹಾಕಬೇಕು, ಯಾವಾಗ ನೀರುಣಿಸಬೇಕು ಹೀಗೆ ತುಳಸಿ ಗೌಡ ಅವರಿಗೆ ತಿಳಿಯದ ಸಂಗತಿಗಳೇ ಇಲ್ಲ.

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.ಇದೀಗ ಇವರು ಇಬ್ಬರು ಮಕ್ಕಳಾದ ಸುಬ್ರಾಯ ಮತ್ತು ಸೋನಿ ಬಿಟ್ಟು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular