Thursday, November 21, 2024
Flats for sale
Homeದೇಶಕಾರ್ಕಳ : ಅತ್ಯಾಚಾರ ಪ್ರಕರಣ : ಕಾಂಗ್ರೆಸ್‌ ಸರಕಾರ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆಯೇ ಇಲ್ಲ,...

ಕಾರ್ಕಳ : ಅತ್ಯಾಚಾರ ಪ್ರಕರಣ : ಕಾಂಗ್ರೆಸ್‌ ಸರಕಾರ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆಯೇ ಇಲ್ಲ, ಕಾನೂನು ವ್ಯವಸ್ಥೆ ಕುಸಿದಿದೆ : ಬಿಜೆಪಿ .

ಕಾರ್ಕಳ : ರಾಜ್ಯದಲ್ಲಿ ಅತ್ಯಾಚಾರ ದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಕಾರಣವೆಂದು ಬಿಜೆಪಿ ಕಿಡಿಕಾರಿದೆ. ಕಾರ್ಕಳದಲ್ಲಿ ಹಿಂದೂ ಯುವತಿಗೆ ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ ಪ್ರಕರಣವನ್ನು ವಿಪಕ್ಷ ಬಿಜೆಪಿ ನಾಯಕರು ಖಂಡತುಂಡವಾಗಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ .

ಕಾರ್ಕಳದಲ್ಲಿ ನಡೆದ ಪ್ರಕರಣ, ಕಾಂಗ್ರೆಸ್‌ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂಬುದನ್ನು ತೋರಿಸುತ್ತಿದೆ. ಅತ್ಯಾಚಾರ ಮಾಡ್ತಾರೆ, ಇಲ್ಲ ಕೇಸ್ ಮುಚ್ಚಿ ಹಾಕ್ತಾರೆ. ಹಾವೇರಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕಾರ್ಕಳದಲ್ಲಿ ಮರುಕಳಿಸಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಟೀಕಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಐವಾನ್ ಡಿಸೋಜಾನೇ ಭಾರತವನ್ನು ಬಾಂಗ್ಲಾ ದೇಶ ಮಾಡ್ತೀನಿ ಅಂತ ಹೇಳಿದ್ದಾನೆ. ಇವನ ಮೇಲೂ ಕಾಂಗ್ರೆಸ್‌ನವರು ಕ್ರಮ ತಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಅಧಿಕಾರ ನಡೆಸಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲ. ಒಂದುವರೆ ವರ್ಷಗಳಿಂದ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸಗಳು ಮಾಡಿಲ್ಲ ಎಂದು ಅಶೋಕ್‌ ಆರೋಪಿಸಿದ್ದಾರೆ.

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅತ್ಯಾಚಾರ ಕೃತ್ಯವನ್ನು ಖಂಡಿಸಿದ್ದಾರೆ. ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ. ಅಮಲು ಬರಿಸುವ ವಸ್ತುವನ್ನ ನೀಡಿ ಅತ್ಯಾಚಾರ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾಗುವ ಜೊತೆಗೆ, ಇಂತ ಕೃತ್ಯಗಳನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಲವ್ ಜಿಹಾದ್‌ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಯುವತಿಯರು ಇಂತಹ ಘಟನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಸರ್ಕಾರ ಇಂತಹ ಪ್ರಕರಣಗಳ ಬಗ್ಗೆ ಗಂಭೀರವಾಗಿ ಚಿಂತಿಸಿ ಕ್ರಮ ತೆಗೆದುಕೊಳ್ಳಬೇಕು. ಹಿಂದೂ ಯುವತಿಯರೂ ಕೂಡ ಇದರಿಂದ ದೂರ ಇರಬೇಕು. ಆಸೆ, ಆಮಿಷಗಳಿಗೆ ಒಳಗಾಗಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರಕ್ಕೆ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಕಾರ್ಕಳದ ಹಿಂದೂ ಯುವತಿ ಅತ್ಯಾಚಾರ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆಯಲು ಕಾರ್ಕಳ ಠಾಣೆಗೆ ಪಶ್ಚಿಮ ವಲಯ ಐಜಿ ಅಮಿತ್ ಸಿಂಗ್ ಆಗಮಿಸಿದ್ದಾರೆ. ಉಡುಪಿ ಎಸ್ಪಿ ಅರುಣ್ ಕೆ., ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಜೊತೆ ಮಾತುಕತೆ ನಡೆಸಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯದೆಲ್ಲೆಡೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ, ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಿಜೆಪಿ ನಾಯಕರು ಸರ್ಕಾರವನ್ನು ದೂರುತ್ತಿರುವ ಬಗ್ಗೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುತ್ತದೆ, ಈ ಹಿಂದೆ ಇಂಥ ಪ್ರಕರಣಗಳು ನಡೆದಾಗ ತಮ್ಮ ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದರು. ಇದೊಂದು ಲವ್ ಜಿಹಾದ್ ಪ್ರಕರಣದಂತೆ ಗೋಚರವಾಗುತ್ತಿದೆ ಅಂತ ಪತ್ರಕರ್ತರು ಹೇಳಿದಾಗ, ಹಾಗೆ ಕ್ರಿಯೇಟ್ ಮಾಡುವ ಪ್ರಯತ್ನ ನಡೆದಿದೆ ಅದರೆ ಸರ್ಕಾರ ಪ್ರಕರಣವನ್ನು ಸೆನ್ಸಿಟೈಸ್ ಮಾಡಲು ಬಿಡಲ್ಲ ಎಂದು ಪರಮೇಶ್ವರ್ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular