ಕಾರ್ಕಳ : ಬೆಳ್ತಂಗಡಿ ನಿವಾಸಿ ನವವಿವಾಹಿತ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ತನಿಖೆ ನಡೆಸಿ, ಮೃತರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಬಂಧಿಸಿದ್ದಾರೆ.

ಮೂಲತಃ ಪುತ್ತೂರು ನೆಲ್ಯಾಡಿಯವರಾದ ಸುದೀಪ್ ರೈ ಹಾಗೂ ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಉದ್ಯೋಗಿಯಾಗಿರುವ ಸೌಮ್ಯ ಶೆಟ್ಟಿ ಫೆಬ್ರವರಿ 17ರಂದು ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ, ಮಾ. 17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ. 30ರಂದು ಮೃತಪಟ್ಟಿದ್ದರು.
ಈ ಸಂಬಂಧ ಮೃತರ ತಂದೆ ದಾಮೋದರ ರೈ ಅವರು ಸಂಶಯ ವ್ಯಕ್ತಪಡಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯ ಬಳಿಕ ದಂಪತಿಗಳ ನಡುವೆ ನಡೆದ ಕಲಹ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು.ಈ ಬಗ್ಗೆ ಮಾಹಿತಿ ಪಡೆದ ಉಡುಪಿ ಜಿಲ್ಲಾ ವರಿಷ್ಠಾದಿಕಾರಿಯವರು ಬಂಧಿಸಲು ಸೂಚನೆ ನೀಡಿದ್ದಾರೆ.


