Saturday, July 25, 2026
Homeಜಿಲ್ಲೆಕಾಸರಗೋಡು: ಶಾಲಾ ಬಸ್ ಡಿಕ್ಕಿ ಹೊಡೆದು 4 ವರ್ಷದ ಮಗು ಸಾವು.

ಕಾಸರಗೋಡು: ಶಾಲಾ ಬಸ್ ಡಿಕ್ಕಿ ಹೊಡೆದು 4 ವರ್ಷದ ಮಗು ಸಾವು.

ಕಾಸರಗೋಡು : ಕಂಬಾರ ಸಿರಿಬಾಗಿಲು ಎಂಬಲ್ಲಿ ಗುರುವಾರ ಮಧ್ಯಾಹ್ನ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಶಾಲಾ ಬಸ್‌ನಡಿಗೆ ಸಿಲುಕಿ ನಾಲ್ಕು ವರ್ಷದ ಶಾಲಾ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

ಸಿರಿಬಾಗಿಲು ನಿವಾಸಿ ಮಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೇಯಾ (4) ಮೃತ ದುರ್ದೈವಿ. ಬಾಲಕಿಯ ಮನೆಯ ಸಮೀಪವೇ ಈ ದುರ್ಘಟನೆ ನಡೆದಿದೆ. ಶಾಲಾ ಬಸ್ ಆಯಿಷಾಳನ್ನು ಆಕೆಯ ಮನೆ ಬಳಿ ಇಳಿಸಿ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಆಕಸ್ಮಿಕವಾಗಿ ಬಸ್ಸಿನ ಕೆಳಗೆ ಬಿದ್ದಿದ್ದಾಳೆ.

ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಆಕೆ ಕೊನೆಯುಸಿರೆಳೆದಿದ್ದಳು.

ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular