ಕುಂದಾಪುರ : ಪತಿ-ಪತ್ನಿಯರ ನಡುವಿನ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದ್ದು, ಪತಿಯೇ ಪತ್ನಿಯನ್ನು ಕೊಂದು ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಲಿಯಲ್ಲಿ ನಡೆದಿದೆ.
ತಾಲೂಕಿನ ಸಾಸ್ತಾನ ಗುಂಡ್ಮಿ ನಿವಾಸಿ ಶ್ಯಾಮ್ ಉಪಾಧ್ಯಾಯ ಅವರ ಪುತ್ರ ಕಿರಣ್ ಉಪಾಧ್ಯಾಯ (30) ಆರೋಪಿ. ಕಿರಣ್ ಎಂಬುವವರ ಪತ್ನಿ ಜಯಶ್ರೀ (28) ಎಂಬಾಕೆಯೇ ಮೃತ ದುರ್ದೈವಿ .
ಕಿರಣ್ ಮತ್ತು ಜಯಶ್ರೀ ಒಂಬತ್ತು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎಂದು ತಿಳಿದಿದೆ .
ಸ್ಥಳೀಯರ ಪ್ರಕಾರ, ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಶುಕ್ರವಾರ ಬೆಳಗ್ಗೆ ಜಯಶ್ರೀ ಅವರ ತಲೆಗೆ ಮಾರಣಾಂತಿಕ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


