Saturday, March 7, 2026
Flats for sale
Homeಜಿಲ್ಲೆಕುಂದಾಪುರ : 'ಕಾಂತಾರ ಚಾಪ್ಟರ್ 1' ಚಿತ್ರದ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಪಲ್ಟಿ,6 ಮಂದಿಗೆ...

ಕುಂದಾಪುರ : ‘ಕಾಂತಾರ ಚಾಪ್ಟರ್ 1’ ಚಿತ್ರದ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಪಲ್ಟಿ,6 ಮಂದಿಗೆ ಗಂಭೀರ ಗಾಯ..!

ಕುಂದಾಪುರ : ಖ್ಯಾತ ನಟ ರಿಷಬ್ ಶೆಟ್ಟಿ ನಟಿಸಿ ಮೊದಲ ಚಾಪ್ಟರ್ ಹಿಟ್ ಆದ ಹಿನ್ನೆಲೆ ಕಾಂತಾರ ಚಾಪ್ಟರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು ಈ ಹಿನ್ನೆಲೆ ಶೂಟಿಂಗ್ ಗಾಗಿ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರಾವಳಿ ಭಾಗದ ವಿವಿಧೆಡೆ ಚಿತ್ರೀಕರಣ ನಡೆಯುತ್ತಿದ್ದು ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದ್ದು ಬಸ್ ನಲ್ಲಿ ಹಲವು ಮಂದಿ ಕಲಾವಿದರು ಇದ್ದರೆಂದು ತಿಳಿದುಬಂದಿದೆ.ಇದರಲ್ಲಿ 20 ಜೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದದ್ದು ಅದರಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular