Monday, May 18, 2026
Flats for sale
Homeಜಿಲ್ಲೆಕೊಡಗು : ದುಬಾರೆ ಶಿಬಿರದಲ್ಲಿ ಸ್ನಾನದ ವೇಳೆ ನಿಯಂತ್ರಣ ತಪ್ಪಿ ಪ್ರವಾಸಿ ಮಹಿಳೆ ಮೇಲೆ ಬಿದ್ದ...

ಕೊಡಗು : ದುಬಾರೆ ಶಿಬಿರದಲ್ಲಿ ಸ್ನಾನದ ವೇಳೆ ನಿಯಂತ್ರಣ ತಪ್ಪಿ ಪ್ರವಾಸಿ ಮಹಿಳೆ ಮೇಲೆ ಬಿದ್ದ ಆನೆ,ಮಹಿಳೆ ಸಾವು .

ಕೊಡಗು : ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಸ್ನಾನ ಕಾರ್ಯಕ್ರಮದ ವೇಳೆ ನಡೆದ ದುರ್ಘಟನೆಯಲ್ಲಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ಎರಡು ಆನೆಗಳ ನಡುವೆ ತಳ್ಳಾಟ ಉಂಟಾಗಿದ್ದು, ಈ ವೇಳೆ ಒಂದು ಆನೆ ನಿಯಂತ್ರಣ ತಪ್ಪಿ ಮಹಿಳೆಯ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಆನೆ ಕೆಳಗೆ ಸಿಲುಕಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಚೆನ್ನೈ ಮೂಲದ 33 ವರ್ಷದ ಜ್ಯುನೇಶ್ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ತನಿಖೆ ಮುಂದುವರಿದಿದೆ. ಪ್ರವಾಸಿಗರ ಸುರಕ್ಷತೆ ಕುರಿತು ಕೂಡ ಪರಿಶೀಲನೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular