Friday, November 22, 2024
Flats for sale
Homeಕ್ರೈಂಕೊಡಗು : ಪತ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ..!

ಕೊಡಗು : ಪತ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ..!

ಕೊಡಗು : ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಈ ಘಟನೆ ನಡೆದಿದೆ. ಶಿಲ್ಪ (36)ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಹತ್ಯೆಗೆ ನಿಖರ ಕಾರಣ ತಿಳಿದು ಇನ್ನೂ ಬಂದಿಲ್ಲ.ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತಿಯನ್ನು ಹತ್ಯೆಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular