Thursday, May 7, 2026
Flats for sale
Homeದೇಶಕೊಲ್ಕತ್ತಾ : ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ.

ಕೊಲ್ಕತ್ತಾ : ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ.

ಕೊಲ್ಕತ್ತಾ : ಪಶ್ಚಿಮ ಬಂಗಾಳ ಬಿಜೆಪಿ ನಾಯಕ Suvendu Adhikari ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ “ಪೂರ್ವಯೋಜಿತ ಕೊಲೆ” ಎಂದು ಅವರು ಆರೋಪಿಸಿದ್ದಾರೆ.

ದಾಳಿಕೋರರು ಘಟನೆಗೆ ಮುನ್ನ 2 ರಿಂದ 3 ದಿನಗಳ ಕಾಲ ‘ಹಿಂಬಾಳಿಸುತ್ತಿದ್ದರೆಂದು’ ಮಾಹಿತಿ ದೊರೆತಿದೆ.

ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ ಪ್ರದೇಶದಲ್ಲಿ ಬುಧವಾರ ರಾತ್ರಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಂದ್ರನಾಥ್ ರಥ್ ಮೇಲೆ ಸಮೀಪದಿಂದ ಗುಂಡಿನ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಮೃತ ಘೋಷಿಸಿದ್ದಾರೆ.

ಆಸ್ಪತ್ರೆ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇದು ಹೃದಯವಿದ್ರಾವಕ ಹಾಗೂ ತಣ್ಣನೆಯ ರಕ್ತದ ಕೊಲೆ” ಎಂದು ಖಂಡಿಸಿದರು. ಪ್ರಕರಣದ ಸಮಗ್ರ ತನಿಖೆಗೆ ಪಶ್ಚಿಮ ಬಂಗಾಳ ಡಿಜಿಪಿ ಸಿದ್ಧನಾಥ್ ಗುಪ್ತ ಭರವಸೆ ನೀಡಿದ್ದಾರೆ ಎಂದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚಂದ್ರನಾಥ್ ರಥ್ ಪ್ರಯಾಣಿಸುತ್ತಿದ್ದ ಮಹೀಂದ್ರ ಸ್ಕಾರ್ಪಿಯೋ ಕಾರನ್ನು ದುಷ್ಕರ್ಮಿಗಳು ಹಿಂಬಾಲಿಸಿದ್ದರು. ನಂತರ ಒಂದು ಕಾರಿನ ಮೂಲಕ ದಾರಿ ತಡೆದು, ಬೈಕ್ ಸವಾರರು ಕಾರಿನ ಕಿಟಕಿಯ ಮೂಲಕ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಚಾಲಕರಿಗೂ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳದಿಂದ ಜೀವಂತ ಗುಂಡುಗಳು ಹಾಗೂ ಖಾಲಿ ಕಾರ್ತೂಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿಗೆ ಬಳಸಿದ ನಿಸ್ಸಾನ್ ಮೈಕ್ರಾ ಕಾರಿನ ನಂಬರ್ ಪ್ಲೇಟ್ ನಕಲಿ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಚಂದ್ರನಾಥ್ ರಥ್ ಭಾರತೀಯ ವಾಯುಪಡೆಯ ಮಾಜಿ ಸಿಬ್ಬಂದಿಯಾಗಿದ್ದು, ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ ಸುವೇಂದು ಅಧಿಕಾರಿ ಅವರ ಆಪ್ತ ವಲಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular