ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ರೈಲ್ವೇ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಪ್ರೇಮಿಗಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.
ಮೃತರನ್ನು ಮಾಲೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸತೀಶ್ (18) ಮಾಲೂರು ತಾಲೂಕಿನ ಪನಮಾಕನಹಳ್ಳಿ ಗ್ರಾಮದ ಶ್ವೇತಾ (17) ಎಂದು ಗುರುತಿಸಲಾಗಿದೆ.
ಕಳೆದ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಅನ್ಯ ಜಾತಿ ಎಂದು ಪ್ರೀತಿಗೆ ಪೋಷಕರ ವಿರೋಧ ವ್ಯಕ್ತವಾಗಿತ್ತು, ಇಂದು ಬೆಳಿಗ್ಗೆ ಬೆಂಗಳೂರಿಗೆ ತೆರಳುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದು ಸತೀಶ್ ನಿನ್ನೆ ತಾನೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದನು.ಸ್ಟಾಹಲಕ್ಕೆ ಬೆಂಗಳೂರಿನ ದಂಡು ರೈಲ್ವೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.