Sunday, March 15, 2026
Flats for sale
Homeರಾಜ್ಯಗಂಗಾವತಿ ; ಅಂಬೇಡ್ಕರ್ ಪ್ರತಿಮೆಗೆ ಟೊಮೆಟೊ ಸಾಸ್ ಎರಚಿ ಅಪಮಾನ ,ದಿಡೀರ್ ಪ್ರತಿಭಟನೆ.

ಗಂಗಾವತಿ ; ಅಂಬೇಡ್ಕರ್ ಪ್ರತಿಮೆಗೆ ಟೊಮೆಟೊ ಸಾಸ್ ಎರಚಿ ಅಪಮಾನ ,ದಿಡೀರ್ ಪ್ರತಿಭಟನೆ.

ಗಂಗಾವತಿ ; ನಗರದ ನ್ಯಾಯಾಲಯದ ಮುಂದಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಅಪರಿಚಿತ ದುಶ್ಕರ್ಮಿಗಳು ಟೊಮೆಟೋ ಸಾಸ್ ಎರಚಿ ಅಪಮಾನ ಮಾಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೆ ಸ್ಥಳದಲ್ಲಿ ಜಮಾಯಿಸಿದ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಪ್ರಮುಖರು, ರಾಷ್ಟ್ರನಾಯಕ ಅಂಬೇಡ್ಕರ್ ಅವರ ಪುತ್ಥಳಿಗೆ ಅಪಮಾನ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ಘಟನೆಗೆ ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕೂಡಲೆ ಅವರನ್ನು ಅಮಾನತ್ತು ಮಾಡಬೇಕು. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಆಗಮಿಸುವ ವರೆಗೂ ಧರಣಿ ಹಿಂತೆಗೆಯುವುದಿಲ್ಲ ಎಂದು ಧರಣಿಕಾರರು ಪಟ್ಟು ಹಿಡಿದರು.

ಮಾಹಿತಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ನಗರಠಾಣೆಯ ಪಿಐ ಪ್ರಕಾಶ್ ಮಾಳೆ, ತಹಸೀಲ್ದಾರ್ ನಾಗರಾಜ್, ಪೌರಾಯುಕ್ತ ಆರ್. ವಿರೂಪಾಕ್ಷಮೂತರ್ಿ ಆಗಮಿಸಿ ಕ್ರಮದ ಭರವಸೆ ನೀಡಿದರು. ಆದರೆ ಧರಣಿ ಹಿಂತೆಗೆತಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ.

ಶಾಸಕ ರೆಡ್ಡಿ ಭರವಸೆ:
ಸ್ಥಳಕ್ಕೆ ಆಗಮಿಸಿದ ಶಾಸಕ ಜಿ. ಜನಾರ್ದನರೆಡ್ಡಿ ಆರೋಪಿಗಳ ಪತ್ತೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ಕಾಲವಕಾಶ ನೀಡೋಣ. ರಾಷ್ಟ್ರ ನಾಯಕನಿಗೆ ಆದ ಅಪಮಾನ ಕೇವಲ ದಲಿತ ಸಮುದಾಯಕ್ಕೆ ಮಾತ್ರ ಮಾಡಲಾದ ಅಪಮಾನವಲ್ಲ.

ಅದು ಕ್ಷೇತ್ರದ ಶಾಸಕ, ಜಿಲ್ಲೆಯ ಸಚಿವ, ಸಂಸದ, ರಾಜ್ಯದ ಮುಖ್ಯಮಂತ್ರಿ, ರಾಷ್ಟ್ರದ ಪ್ರಧಾನ ಮಂತ್ರಿಗೆ ಮಾಡಿದ ಅಪಮಾನ. ಹೀಗಾಗಿ ಆರೋಪಿಗಳ ಬಂಧನದಲ್ಲಿ ಯಾವುದೇ ಪ್ರಶ್ನೆ ಇಲ್ಲ. ಅಲ್ಲದೇ ಇಂದಿನಿಂದಲೇ ಅಂಬೇಡ್ಕರ್ ವೃತ್ತದಲ್ಲಿ ಸಿಸಿ ಕ್ಯಾಮರ ಅಳವಡಿಸಲು ಕ್ರಮ ಕೈಗೊಳ್ಳುತ್ತೇನೆ. ಕಿಡಿಗೇಡಿಗಳ ಕೃತ್ಯದಿಂದ ಮಲೀನವಾಗಿರುವ ಮೂತರ್ಿಯನ್ನು ನೀರಿನಿಂದ ತೊಳೆದು ಶುದ್ಧಗೊಳಿಸೋಣ. ಪೂಜೆ ಸಲ್ಲಿಸುವ ಮೂಲಕ ಮತ್ತೆ ಅಂಬೇಡ್ಕರ್ಮೂತರ್ಿಯನ್ನು ಶುಚಿಯಾಗಿಡೋಣ. ಇದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದರು.  

RELATED ARTICLES

LEAVE A REPLY

Please enter your comment!
Please enter your name here

Most Popular