ಗಂಗಾವತಿ : ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸೇರಿದ ಹಿನ್ನೆಲೆ, ಗಂಗಾವತಿಯ ಶಾಸಕ ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದರೆಡ್ಡಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಚರ್ಚೆ ಕ್ಷೇತ್ರದಲ್ಲಿ ಹರಡಿದೆ.
ಸಾರ್ವಜನಿಕ ವಲಯದಲ್ಲಿ ಚಚರ್ೆಯಾಗುತ್ತಿರುವ ಸುದ್ದಿಗೆ ಪೂರಕ ಎಂಬಂತೆ ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಸ್ವತಃ ಶಾಸಕ ಜನಾರ್ದರೆಡ್ಡಿ ಅಳವಡಿಸಿದ್ದ ಪ್ಲೆಕ್ಸ್ ಮತ್ತು ಬ್ಯಾನರ್ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾರಾಜಿಸಿದ್ದರು.
ಹೀಗಾಗಿ ರೆಡ್ಡಿ ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿ ಕಳೆದ ನಾಲ್ಕಾರು ದಿನಗಳಿಂದ ಕ್ಷೇತ್ರದ ಜನರಲ್ಲಿ ಚಚರ್ೆಯಾಗುತ್ತಿದೆ. ಈ ಮಧ್ಯೆ ರೆಡ್ಡಿ ಅವರ ರಾಜಕೀಯ ಹಿತೈಷಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ ಹಿನ್ನೆಲೆ ರೆಡ್ಡಿಯೂ ಮತ್ತೆ ಪಕ್ಷ ಸೇರುತ್ತಾರೆ ಎಂಬ ವದಂತಿ ದಟ್ಟವಾಗಿ ಹರಿದಾಡುತ್ತಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೆಡ್ಡಿ, ಬಿಜೆಪಿ ಸೇರುವ ಯಾವುದೇ ಪ್ರಸ್ತಾಪವಿಲ್ಲ. ಈ ಬಗ್ಗೆ ಪಕ್ಷದ ಹಿರಿಯ ನಾಯಕರು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ನಾನು ಪ್ರತಿಕ್ರಿಯೆ ನೀಡಿಲ್ಲ. ಲೋಕಸಭೆಯ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳು ಸ್ವತಂತ್ರವಾಗಿಯೇ ಸ್ಪರ್ದಿಸಲಿದ್ದಾರೆ ಎಂದು ತಿಳಿಸಿದ್ದಾರೆ.