Saturday, March 14, 2026
Flats for sale
Homeರಾಜ್ಯಗಂಗಾವತಿ ; ಸತತ ಹಾಜರಿ: ಶಾಸಕ ರೆಡ್ಡಿಗೆ ಸ್ಪೀಕರ್ ಉಡುಗೊರೆಯ ಮೂಲಕ‌ ಅಭಿನಂದನೆ.

ಗಂಗಾವತಿ ; ಸತತ ಹಾಜರಿ: ಶಾಸಕ ರೆಡ್ಡಿಗೆ ಸ್ಪೀಕರ್ ಉಡುಗೊರೆಯ ಮೂಲಕ‌ ಅಭಿನಂದನೆ.

ಗಂಗಾವತಿ : ಕಳೆದ ವಿಧಾನಸಭೆಯ ಅಧಿವೇಶನದ ಕಲಾಪದ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಬಿಡುವಿನ ಸಂದರ್ಭದಲ್ಲಿ ತಮ್ಮ ಕೋಠಡಿಗೆ ಕರೆಯಿಸಿಕೊಂಡ ಸ್ಪೀಕರ್, ಪುಟ್ಟ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು.

ವಿಧಾನಸೌಧದಲ್ಲಿ ನಡೆದ ಕಳೆದ ಅಧಿವೇಶನದ 14 ದಿನಗಳ ಎಲ್ಲಾ ಕಾರ್ಯಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿ ದಿನದ ಕಲಾಪಗಳು ಮುಗಿಯುವವರೆಗೂ ಇದ್ದು ರೆಡ್ಡಿ ಗಮನ ಸೆಳೆದಿದ್ದರು.ಈ ಹಿನ್ನೆಲೆ ಅಭಿನಂದಿಸಿದ ಖಾದರ್, ಚುನಾಯಿತ ಪ್ರತಿನಿಧಿಗಳಿಗೆ ಕೇವಲ ತಮ್ಮ ಕ್ಷೇತ್ರದ ಬಗ್ಗೆ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಬಗ್ಗೆಯೂ ಗಮನ ಇರಬೇಕು.ಈ ನಿಟ್ಟಿನಲ್ಲಿ ಕಲಾಪದಲ್ಲಿನ ಚಟುವಟಿಕೆಗಳಲ್ಲಿ ಭಾಗಿಯಾಗುವ ನಿಮ್ಮ ಹಾಜರಾತಿಯ ನಡಾವಳಿಕೆ ಇತರರಿಗೆ ಮಾದರಿಯಾಗಿದೆ ಎಂದು ಸ್ಪೀಕರ್ ಅಭಿನಂದಿಸಿದ್ದಾರೆ ಎಂದು ರೆಡ್ಡಿ ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೂತನ ಪಕ್ಷ ಕಟ್ಟಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಜನಾರ್ದನ ರೆಡ್ಡಿ, ಸದನದ ಪ್ರತಿ ಕಲಾಪದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular